ಅಭಿಪ್ರಾಯ / ಸಲಹೆಗಳು

ಮೂಲೋದ್ದೇಶಗಳು

 ರಾಷ್ಟ್ರೀಯ ಹಸಿರು ಪಡೆ ಕಾರ್ಯಕ್ರಮವು ಭಾರತ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಒಂದು ಪ್ರಮುಖ ಉಪಕ್ರಮವಾಗಿದೆ. ೨೦೦೧-೦೨ರಲ್ಲಿ ಪ್ರಾರಂಭಿಸಲಾದ ಪರಿಸರ ಜಾಗೃತಿ ಮೂಡಿಸಲು ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯತ್ತ ಕೆಲಸ ಮಾಡುವ ಶಾಲಾ ವಿದ್ಯಾರ್ಥಿಗಳನ್ನು ಕಾರ್ಯಕರ್ತರನ್ನಾಗಿ ನಿರ್ಮಿಸುವ ಗುರಿಯನ್ನು ಹೊಂದಿರುತ್ತದೆ. 

 

ರಾಹಪದ ಮೂಲೋದ್ದೇಶಗಳು ಇಂತಿವೆ:

  • ಮಕ್ಕಳ ಅನುಭವದ ಮೂಲಕ ಅವರ ಸುತ್ತ ಮುತ್ತಲಿನ ವಾತಾವರಣ, ಪರಸ್ಪರ ಕ್ರಿಯೆಗಳು ಮತ್ತು ಅದರಲ್ಲಿನ ಸಮಸ್ಯೆಗಳ ಬಗ್ಗೆ ಮಕ್ಕಳಿಗೆ ಜ್ಞಾನವನ್ನು ನೀಡುವುದು.

  • ಪರಿಸರ ಚಟುವಟಿಕೆಗಳ ಮೂಲಕ ಪರಿಸರವನ್ನು ಸಂರಕ್ಷಿಸಲು ಅಗತ್ಯವಾದ ವೀಕ್ಷಣೆ, ಪ್ರಯೋಗ, ಸಮೀಕ್ಷೆ, ಸಂಗ್ರಹಣೆ, ವಿಶ್ಲೇಷಣೆ, ತಾರ್ಕಿಕ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು.

  •  ಕ್ರಿಯಾಶೀಲ ಆಧಾರಿತ ಕಾರ್ಯಕ್ರಮಗಳ ಮೂಲಕ ಪರಿಸರ ಮತ್ತು ಅದರ ಸಂರಕ್ಷಣೆಗೆ ಸಂಬಂಧಿಸಿದಂತೆ ಮಕ್ಕಳಲ್ಲಿ ಸರಿಯಾದ ಆಲೋಚನೆಗಳನ್ನು ಬೆಳೆಸುವುದು.

  •  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಿಕೆ ಮತ್ತು ಪ್ರದರ್ಶನಗಳ ಮೂಲಕ ಪರಿಸರ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮಕ್ಕಳನ್ನು ಸಂವೇದನಾಶೀಲಗೊಳಿಸುವುದು.

  •  ಮಕ್ಕಳಲ್ಲಿ ತಾರ್ಕಿಕ ಮತ್ತು ಸ್ವತಂತ್ರ ಚಿಂತನೆಯನ್ನು ಉತ್ತೇಜಿಸುವುದು ವೈಜ್ಞಾನಿಕ ವಿಚಾರಣೆಯ ಮನೋಭಾವವನ್ನು ಅವುಗಳಲ್ಲಿ ಮೂಡಿಸುವ ಮೂಲಕ ಸರಿಯಾದ ಆಯ್ಕೆಗಳನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ.

  •  ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಕ್ರಿಯಾ ಯೋಜನೆಗಳಲ್ಲಿ ಅವರನ್ನು ತೊಡಗಿಸುವುದು.

  •  ಈ ಕಾರ್ಯಕ್ರಮವು ‘ಶಾಲೆಯಿಂದ ಸಮಾಜಕ್ಕೆ’ ಪರಸ್ಪರ ಕ್ರಿಯೆಗಳ ಮೂಲಕ ಸಮಾಜವನ್ನು ಸಂವೇದನಾಶೀಲಗೊಳಿಸಲು  ಪ್ರೆರೇಪಿಸುತ್ತದೆ.

ಇತ್ತೀಚಿನ ನವೀಕರಣ​ : 05-03-2020 12:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ರಾಷ್ಟ್ರೀಯ ಹಸಿರು ಪಡೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080